
ಸಮನ್ವಯ ಶಿಕ್ಷಣ ಕಾರ್ಯಕ್ರಮದಡಿ ಮಧುಗಿರಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿಗಳಲ್ಲಿ ಪ್ರಸ್ತುತ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರಾಥಮಿಕ ಮತ್ತು ಪ್ರೌಢ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರ್ಸಿಐ ನಿಯಮಾವಳಿಯಂತೆ ಪ್ರಾಥಮಿಕ ಶಾಲೆಗಳಿಗೆ ವಿಶೇಷ ಡಿಇಡಿ/ಎಂ.ಸಿ.ಟಿ.ಟಿ. ಮತ್ತು ಅಡನ್ ಕೋರ್ಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಹಾಗೂ ಪ್ರೌಢಶಾಲೆಗಳಿಗೆ ವಿಶೇಷ ಬಿಇಡಿ ಪದವಿಯ ವಿದ್ಯಾರ್ಹತೆ ಹೊಂದಿರುವವರನ್ನು ನೇರ ಗುತ್ತಿಗೆ ಮೂಲಕ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಿದ್ದು, ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕ ಪಟ್ಟಿಗಳು, ಪ್ರಮಾಣ ಪತ್ರಗಳು ಮತ್ತು ಆರ್ಸಿಐ ನೋಂದಣಿ ಪ್ರಮಾಣ ಪತ್ರದೊಂದಿಗೆ ಸ್ವ-ವಿವರವುಳ್ಳ ಮಾಹಿತಿಯನ್ನು ಜೂನ್ 9, 2022 ರಂದು ಸಂಜೆ 5 ಗಂಟೆಯೊಳಗಾಗಿ ಅಂಚೆ ಅಥವಾ ಮುದ್ದಾಂ ಸಲ್ಲಿಸಲು ಕೋರಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂ. 9448999435ನ್ನು ಸಂಪರ್ಕಿಸಬಹುದೆAದು ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು