web stats

Madhugirinews

#1NewsofMadhugiri

ಸಾಮಾನ್ಯ ಪ್ರವೇಶ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಬಳಿ ನಿಷೇಧಾಜ್ಞೆ ಜಾರಿ

ತುಮಕೂರು: ಜಿಲ್ಲಾ ವ್ಯಾಪ್ತಿಯ ತುಮಕೂರು ನಗರದಲ್ಲಿ 14 ಪರೀಕ್ಷಾ ಕೇಂದ್ರಗಳು ಹಾಗೂ ತಿಪಟೂರು ಮತ್ತು ಶಿರಾ ನಗರದಲ್ಲಿ ತಲಾ 2 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 18 ಪರೀಕ್ಷಾ ಕೇಂದ್ರಗಳಲ್ಲಿ ಜೂನ್ 16 ಮತ್ತು 17 ರಂದು, 2022ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜೂ. 16 ಮತ್ತು 17ರಂದು ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀ. ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ನಿಷೇಧಾಜ್ಞೆಯು ಈ ಮೇಲೆ ತಿಳಿಸಲಾದ ದಿನಾಂಕಗಳಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 4.30ರವರೆಗೆ ಜಾರಿಯಲ್ಲಿದ್ದು, ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಲಾಗುವುದು. ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬAದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರಡಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಮತ್ತು ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧೀಕೃತ ವ್ಯಕ್ತಿಗಳು ಯಾರೂ ನಿಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ, ನಿಷೇಧಾಜ್ಞೆ ಉಲ್ಲಂಘಿಸಿ ನಿರ್ಬಂಧಿತ ಪ್ರವೇಶ ಪ್ರವೇಶಿಸುವ ಅನಧೀಕೃತ ವ್ಯಕ್ತಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

You may have missed