
ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕದೇ, ಅಡ್ಡಮತದಾನ ಮಾಡಿದ್ದಾರೆ ಎಂದು ಆರೋಪಿಸಿ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಮನೆಗೆ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಜೆಡಿಎಸ್ ಕಚೇರಿಯಲ್ಲಿ ಸಭೆ ಸೇರಿದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಹಾಕದೇ,ಬಿಜೆಪಿ ಅಭ್ಯರ್ಥಿಗೆ ಮತ ಹಾಕುವ ಮೂಲಕ ಪಕ್ಷದ್ರೋಹ ಎಸಗಿರುವ ಶಾಸಕ ಎಸ್.ಆರ್.ಶ್ರೀನಿವಾಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ, ರಾಜಕಾರಣ ಮಾಡುವಂತೆ ಆಗ್ರಹಿಸಲು ನಿರ್ಧರಿಸಿದ ನಂತರ ಶಾಸಕರ ಮನೆಗೆ ಮುತ್ತಿಗೆ ಹಾಕಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜಿನಪ್ಪ ನೇತೃತ್ವದಲ್ಲಿ ಮುಖಂಡರಾದ ಬೆಳ್ಳಿ ಲೋಕೇಶ್,ದೇವರಾಜು, ಕೃಷ್ಣಮೂರ್ತಿ,ಪಾಲಿಕೆ ಸದಸ್ಯ ಹೆಚ್.ಡಿ. ಕೆ.ಮಂಜುನಾಥ್, ಮಹಿಳಾ ಘಟಕದ ಅಧ್ಯಕ್ಷೆ ತಹೇರಾ ಹುನ್ನೀಸಾ, ಶ್ರೀನಿವಾಸ್‌ಪ್ರಸಾದ್, ಡಾಂಡೇಲಿ ಗಂಗಣ್ಣ, ಸೇರಿದಂತೆ ನೂರಾರು ಕಾರ್ಯಕರ್ತರು ಶಾಸಕ ಎಸ್.ಆರ್.ಶ್ರೀನಿವಾಸ್ ಮನೆಗೆ ಮುತ್ತಿಗೆ ಹಾಕಿದರು.
ಜೆಡಿಎಸ್ ಕಾರ್ಯಕರ್ತರನ್ನು ಸ್ವಾಗತಿಸಲು ನಿಂತ ವಾಸಣ್ಣ
ಜೆಡಿಎಸ್ ಮುಖಂಡರು ಹಾಗೂ ಪದಾಧಿಕಾರಿಗಳು ಮುತ್ತಿಗೆ ಹಾಕುವ ವಿಚಾರ ತಿಳಿದ ಶಾಸಕ ಎಸ್.ಆರ್.ಶ್ರೀನಿವಾಸ್ ಬೆಂಬಲಿಗರೊAದಿಗೆ ಮನೆಯಿಂದ ಹೊರಬಂದು ಕಾರ್ಯಕರ್ತರೊಂದಿಗೆ ಕಾಯುತ್ತಿದ್ದರು, ಈ ವೇಳೆ ವಾಸಣ್ಣ ತೊಲಗಲಿ ಎಂದು ಧಿಕ್ಕಾರ ಕೂಗುತ್ತ ಬಂದ ಕಾರ್ಯಕರ್ತರಿಗೆ ಪ್ರತಿಯಾಗಿ ಎಸ್.ಆರ್.ಶ್ರೀನಿವಾಸ್ ಬೆಂಬಲಿಗರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ದಿಕ್ಕಾರ ಕೂಗಿದರು. ಈ ವೇಳೆ ಉಂಟಾದ ಗೊಂದಲದಿAದ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣ ವಾಯಿತು, ಜೆಡಿಎಸ್ ಕಾರ್ಯಕರ್ತರ ಮಧ್ಯೆ ನುಗ್ಗಿದ ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ಬೆಂಬಲಿಗರೊAದಿಗೆ ವಾಗ್ವಾದ ನಡೆಯಿತು. ಎರಡು ಕಡೆಯವರನ್ನು ನಿಯಂತ್ರಿಸಲು ಪೊಲೀಸರು ಪರದಾಡಿದರು
ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೇ ಆರೋಪ
ಶಾಸಕರ ಅಡ್ಡಮತದಾನದ ಬಗ್ಗೆ ನ್ಯಾಯ ಕೇಳಲು ಬಂದ ಜೆಡಿಎಸ್ ಮುಖಂಡರು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಾರೆ,ಪ್ರಜಾ ಪ್ರಭುತ್ವದಲ್ಲಿ ನ್ಯಾಯ ಕೇಳುವ ಹಕ್ಕು ಎಲ್ಲರಿಗೂ ಇದೆ, ನೈತಿಕತೆ ಇಲ್ಲದೇ ದಬ್ಬಾಳಿಕೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ಆರೋಪಿಸಿದರು. ಪಕ್ಷದಿಂದ ಗೆದ್ದಿದ್ದಾರೆ ನಮ್ಮ ಪಕ್ಷದ ಮುಖಂಡ ಮನೆಗೆ ಬಂದರೆ ಜೆಡಿಎಸ್ ನಗರಸಭಾ ಸದಸ್ಯ ರವಿ ಅವರ ಕೊರಳ ಪಟ್ಟಿ ಹಿಡಿದು ಹಲ್ಲೆ ನಡೆಸಲು ಮುಂದಾದರು, ಪಕ್ಷದ ಸರ್ವೋಚ್ಛ ನಾಯಕರಾದ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಏಕ ವಚನದಲ್ಲಿ ನಿಂದಿಸುತ್ತಾರೆ, ಇವರಿಗೆ ತಾಕತ್ತಿದ್ದರೆ ರಾಜೀನಾಮೆ ಸಲ್ಲಿಸಿ ಚುನಾವಣೆ ಎದುರಿಸಲಿ ಎಂದು ಸವಾಲು ಹಾಕಿದರು.
ಈ ವೇಳೆ ಮಾತನಾಡಿದ ಶಾಸಕ ಎಸ್.ಆರ್.ಶ್ರೀನಿವಾಸ್ ನಾನು ಪಕ್ಷದ್ರೋಹ ಬಗೆದಿಲ್ಲ.ಜೆಡಿಎಸ್ ಪಕ್ಷಕ್ಕೆ ಮತ ಹಾಕಿದ್ದೇನೆ. ಅದನ್ನು ಎಂಜೆಟ್ ಆಗಿದ್ದ ಹೆಚ್.ಡಿ.ರೇವಣ್ಣ ಅವರಿಗೂ ತೋರಿಸಿದ್ದೇನೆ.ಆದರೆ ಒಂದರ ಹಿಂದೆ ಒಂದರAತೆ ತಪ್ಪು ಸಂದೇಶಗಳನ್ನು ನೀಡಿ,ನನ್ನ ವರ್ಚ್ಚಸಿಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.ಹೆಚ್.ಡಿ.ಕುಮಾರಸ್ವಾಮಿಗೆ ಪಕ್ಷ ನಡೆಸುವ ಶಕ್ತಿ ಇಲ್ಲ. ಅವನಿಗೆ ಕಚ್ಚೆ, ಬಾಯಿ ಎರಡು ಹಿಡಿತದಲ್ಲಿಲ್ಲ.ಆತನಿಂದ ನಾನು ಗೆದ್ದಿಲ್ಲ.ನಾನು ಶಾಸಕನಾಗಿದ್ದೆ ಪಕ್ಷೇತರ ಅಭ್ಯರ್ಥಿಯಾಗಿ, ಕುಮಾರಸ್ವಾಮಿ ಮೊದಲು ರಾಜೀನಾಮೆ ನೀಡಿ, ಪಕ್ಷ ವಿಸರ್ಜಿಸಲಿ, ಇದರಿಂದ ಯಾರಿಗೂ ಉಪಯೋಗವಿಲ್ಲ ಎಂದರು.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು