web stats

Madhugirinews

#1NewsofMadhugiri

ಸಿದ್ದರಬೆಟ್ಟ ಶ್ರೀಮಠದ 16ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ತುಮಕೂರು: ಶ್ರೀಕ್ಷೇತ್ರ ಸಿದ್ಧರಬೆಟ್ಟ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ 16ನೇ ವರ್ಷದ ವಾರ್ಷಿಕೋತ್ಸವ, ಶ್ರೀ ಜಗದ್ಗುರು ರೇಣುಕಾಚಾರ್ಯರ, ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಉಚಿತ ಸಾಮೂಹಿಕ ವಿವಾಹ, ಸಿದ್ಧಶ್ರೀ ಪ್ರಶಸ್ತಿ ಪ್ರದಾನ ಮತ್ತು ಜನಜಾಗೃತಿ ಧರ್ಮ ಸಮಾರಂಭವನ್ನು ಜೂ.23 ರಂದು ಕೊರಟಗೆರೆ ತಾಲ್ಲೂಕು ಸಿದ್ಧರಬೆಟ್ಟ ಸುಕ್ಷೇತ್ರದಲ್ಲಿ ಏರ್ಪಡಿಸಲಾಗಿದೆ ಎಂದು ಸಿದ್ಧರಬೆಟ್ಟ ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಬೆಟ್ಟ ಶ್ರೀಮಠದ 16ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಜೂ.21ರಂದು ಶ್ರೀಮಠ ಮತ್ತು ಜಿಲ್ಲಾಡಳಿತದಿಂದ ಅಂತರಾಷ್ಟಿçÃಯ ಯೋಗಶಿಬಿರ ಆಯೋಜಿಸಲಾಗಿದೆ. ಜೂ.22ರಂದು ಬೆಳಿಗ್ಗೆ 10 ಗಂಟೆಗೆ ಪುಸ್ತಕ ದಾಸೋಹ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಚಿಕ್ಕತೊಟ್ಲುಕೆರೆ ಅಟವೀ ಮಠದ ಶ್ರೀ ಅಟವೀ ಶಿವಲಿಂಗ ಸ್ವಾಮೀಜಿ ಉದ್ಘಾಟಿಸಲಿದ್ದು, ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಶ್ರೀ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸಿದ್ಧರೇಣುಕ ಶಿವಾಚಾರ್ಯ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ. ಈ ಪುಸ್ತಕ ದಾಸೋಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವವರು 1 ಪುಸ್ತಕ ತಂದು 2 ಪುಸ್ತಕಗಳನ್ನು ತೆಗೆದುಕೊಳ್ಳುವ ಅವಕಾಶವಿದೆ ಎಂದು ಹೇಳಿದರು. ಕಾರ್ಯಕ್ರಮದ ಅಂಗವಾಗಿ ವಿವಿಧ ಧಾರ್ಮಿಕ ಹೋಮ ಹವನಗಳು ನಡೆಯಲಿದ್ದು, ರಾತ್ರಿ 8.30ಕ್ಕೆ ದೀಕ್ಷಾರ್ಥಿಗಳಿಗೆ ಧರ್ಮೋಪದೇಶ ಹಾಗೂ ಸಂಸ್ಕಾರ ನೆರವೇರಲಿದೆ ಎಂದರು.
ಜೂ.23 ರಂದು ಶ್ರೀಕ್ಷೇತ್ರನಾಥ ಶ್ರೀ ಸಿದ್ಧೇಶ್ವರಸ್ವಾಮಿಗೆ ಕುಂಭಾಭಿಷೇಕ, ಬಿಲ್ವಾರ್ಚನೆ, ಮಹಾಗಣಪತಿ, ಶ್ರೀ ಜಗದ್ಗುರು ರೇಣುಕಾಚಾರ್ಯರ ಹಾಗೂ ಶ್ರೀ ವೀರಭದ್ರಸ್ವಾಮಿಗೆ ಮಹಾರುದ್ರಾಭಿಷೇಕ ಜರುಗಲಿದೆ. ಬೆಳಿಗ್ಗೆ 6.30ಕ್ಕೆ ಉಚಿತ ಸಾಮೂಹಿಕ ದೀಕ್ಷಾ ಸಂಸ್ಕಾರ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಶ್ರೀ ನಂಜುAಡೇಶ್ವರ ಒಡೆಯರ್ ಶಿವಾಚಾರ್ಯ ಸ್ವಾಮೀಜಿ, ಶ್ರೀ ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶಿವಯೋಗಿ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಅಂದು ಬೆಳಿಗ್ಗೆ 7.30ಕ್ಕೆ ಶ್ರೀ ಜಗದ್ಗುರು ರೇಣುಕಾಚಾರ್ಯರ ಶ್ರೀಕ್ಷೇತ್ರನಾಥ ಶ್ರೀ ಸಿದ್ಧೇಶ್ವರಸ್ವಾಮಿಯ ಹಾಗೂ ಶ್ರೀ ಬಸವೇಶ್ವರರ ಮೊಗ್ಗಿನ ಪಲ್ಲಕ್ಕಿ ಉತ್ಸವ ಜರುಗಲಿದೆ 8.30ಕ್ಕೆ ಶ್ರೀಮಠದ ಪ್ರಾಂಗಣದ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಶಾಸ್ತç ಹಾಗೂ ಧಾರೆ ಕಾರ್ಯಗಳು ನೆರವೇರಲಿವೆ. ಉಚಿತ ಸಾಮೂಹಿಕ ವಿವಾಹಕ್ಕೆ ಈಗಾಗಲೇ 28 ಜೋಡಿಗಳು ನೊಂದಾಯಿಸಿದ್ದು, ಜೂ.23ರವೇಳೆಗೆ ಇನ್ನೂ ಹಲವಾರು ಜೋಡಿಗಳು ನೊಂದಾಯಿಸಲಿವೆ ಎಂದರು.
ಜೂ.23 ರಂದು ಬೆಳಿಗ್ಗೆ 10 ಗಂಟೆಗೆ ಜನಜಾಗೃತಿ ಧರ್ಮ ಸಮಾರಂಭ ನಡೆಯಲಿದ್ದು, ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಬಾಳೆಹೊನ್ನೂರು ಶ್ರೀಮಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಚಾರ್ಯ ಭಗವತ್ಪಾದರು ಮತ್ತು ಕೇದಾರ ಪೀಠದ ಶ್ರೀಹಿಮವತ್ಕೇದಾರ ವೈರಾಗ್ಯ ಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ರಾವಲ್ ಪದವಿ ಭೂಷಿತ ಭೀಮಾಶಂಕರಲಿAಗ ಶಿವಾಚಾರ್ಯ ಭಗವತ್ಪಾದಕರು ವಹಿಸಲಿದ್ದಾರೆ ಎಂದರು. ವಿವಿಧ ಮಠಾಧೀಶರ ಸಮ್ಮುಖದಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರಗ ಜ್ಞಾನೇಂದ್ರ ಉದ್ಘಾಟಿಸಲಿದ್ದು, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ವಸತಿ ಸಚಿವ ವಿ.ಸೋಮಣ್ಣ ಸಸಿ ವಿತರಣೆ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಭಸ್ಮ ಘಟಕ ಉದ್ಘಾಟನೆ,ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗೋಶಾಲೆ ಶಂಕುಸ್ಥಾಪನೆ, ಸಂಸದ ಜಿ.ಎಸ್. ಬಸವರಾಜು ಮಾಂಗಲ್ಯ ವಿತರಣೆ, ಮಾಜಿ ಶಾಸಕ ಕೆ.ಎನ್.ರಾಜಣ್ಣ ವಧು-ವರರಿಗೆ ವಸ್ತç ವಿತರಣೆ, ಮಾಜಿ ಶಾಸಕ ಸುಧಾಕರ್‌ಲಾಲ್ ಮೂಗುತಿ ವಿತರಣೆ ಮಾಡಲಿದ್ದಾರೆ ಎಂದು ವಿವರಿಸಿದರು.
ಮಂಜುನಾಥ್‌ಗೆ ಸಿದ್ಧಶ್ರೀ ಪ್ರಶಸ್ತಿ ಪ್ರಧಾನ:
ಸಿದ್ದರಬೆಟ್ಟ ಶ್ರೀಮಠದಿಂದ ಪ್ರತಿವರ್ಷದಂತೆ ಸಾಮಾಜಿಕವಾಗಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಜಯದೇವ ಹೃದ್ರೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಸಿದ್ದಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಕಾರ್ಯಕ್ರಮಕ್ಕೆ ತುಮಕೂರು ಜಿಲ್ಲೆಯ ಎಲ್ಲಾ ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು ಸೇರಿದಂತೆ ಜಿಲ್ಲೆಯ ಭಕ್ತಾವೃಂದ 3ದಿನಗಳ ಕಾಲ ಉಪಸ್ಥಿತರಿರುವರು ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ವೀರಶೈವ ಸಮಾಜದ ಅಧ್ಯಕ್ಷ ಟಿ.ಬಿ.ಶೇಖರ್, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಮೋಹನ್‌ಕುಮಾರ್ ಪಟೇಲ್, ಕಾರ್ಯದರ್ಶಿ ಅತ್ತಿ ರೇಣುಕಾನಂದ, ಟಿ.ಅರ್. ಸದಾಶಿವಯ್ಯ, ಕೆ.ಪಿ.ಮಹೇಶ್, ಎಂ.ಎಸ್.ಉಮೇಶ್, ಕೃಷ್ಣಪ್ಪ, ಶಿವಕುಮಾರ್, ಗಂಗಾಧರಶಾಸ್ತಿç, ಮಲ್ಲಸಂದ್ರ ಶಿವಣ್ಣ, ಮಂಜುಳ ಮುಂತಾದವರು ಹಾಜರಿದ್ದರು.

 

You may have missed