web stats

Madhugirinews

#1NewsofMadhugiri

2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಪ್ರಾರಂಭ

ತುಮಕೂರು: ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಮೈಸೂರಿನ ಕರಾಮುವಿಯ 2022-23ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿ ಪ್ರಾರಂಭವಾಗಿದೆ.
ಕೆಎಸ್‌ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಸಕ್ತ 2022-23ನೇ (ಜುಲೈ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದB.A.,/B Com/B.B.A/B.C.A/B.Sc (General, IT, Home Science)/BLibISc., M.A/MCJ., MCom (Dual Specialization- 1. Accounting & Finance/HRM  2. Marketing Management & HRM/Finance) ಎಂ.ಬಿ.ಎ ( AICTE Approved) (Specialization – •Finance • HRM • Marketing Management • Operations • Tourism • Corporate Law • Information Technology), MLibISc., M.Sc., PG Diploma., Diploma., Certificate Programs ಗಳಿಗೆ ಗಳಿಗೆ ಪ್ರವೇಶಾತಿ ಆರಂಭಗೊAಡಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, . ಡಿಫೆನ್ಸ್ / ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ, ಅಟೋ/ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ ಪ್ರವೇಶಾತಿ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುತ್ತದೆ. ಕೋವಿಡ್ ನಿಂದ ಮರಣ ಹೊಂದಿದ ಪೋಷಕ ಮಕ್ಕಳಿಗೆ, ತೃತೀಯ ಲಿಂಗಿಗಳಿಗೆ, ದೃಷ್ಟಿ ಹೀನ ವಿದ್ಯಾರ್ಥಿಗಳಿಗೆ ಪೂರ್ಣ ಶುಲ್ಕ ವಿನಾಯಿತಿ ಇರುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪ್ರವೇಶಾತಿ ಸಂದರ್ಭದಲ್ಲಿ ಮಾತ್ರ ಕೇಂದ್ರ ಕಚೇರಿ ಮತ್ತು ಪ್ರಾದೇಶಿಕ ಕೇಂದ್ರಗಳು ಸರ್ಕಾರಿ ರಜಾ ದಿನಗಳಾದ ಭಾನುವಾರ ಮತ್ತು 2ನೇ ಶನಿವಾರ ಹಾಗೂ 4ನೇ ಶನಿವಾರ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು ಎಂದು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕ ಡಾ. ಲೋಕೇಶ ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

You may have missed