web stats

Madhugirinews

#1NewsofMadhugiri

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು: ಬೆಂಗಳೂರಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ತುಮಕೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಬಜ್ಜನಹಳ್ಳಿಯಲ್ಲಿರುವ ಏಕಲವ್ಯ ಮಾದರಿ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಖಾಲಿ ಇರುವ Chemistry  ಮತ್ತು  Biology  ವಿಷಯ ಕುರಿತು ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಎಂಎಸ್‌ಸಿ, ಬಿಎಡ್ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಮಾಹೆಯಾನ ರೂ. 12000 ಗಳ ವೇತನದೊಂದಿಗೆ ಉಚಿತ ವಸತಿ ಮತ್ತು ಊಟ ನೀಡಲಾಗುತ್ತದೆ. ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9986831986, 9880618203ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

You may have missed