web stats

Madhugirinews

#1NewsofMadhugiri

ರೈತರಿಂದ ಮುಂಗಾರು ಬೆಳೆ ಸಮೀಕ್ಷೆಗೆ ಆಫ್ ಸಿದ್ಧ

ತುಮಕೂರು: 2022-23ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲೆಯಲ್ಲಿ ಆರಂಭವಾಗಿದ್ದು, ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ತಿಪಟೂರು, ಚಿಕ್ಕನಾಯಕನಹಳ್ಳಿ ಮತ್ತು ತುರುವೇಕೆರೆ ತಾಲ್ಲೂಕುಗಳ ರೈತ ಭಾಂದವರು ಪೂರ್ವ ಮುಂಗಾರು ಹಂಗಾಮಿನಲ್ಲಿ ಈಗಾಗಲೇ ಬಿತ್ತನೆಯಾಗಿರುವ ಬೆಳೆಯ ವಿವರಗಳನ್ನು “ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್-2022-23” ಮೂಲಕ ಕೂಡಲೇ ದಾಖಲಿಸಲು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ. ಬೆಳೆ ಸಮೀಕ್ಷೆ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಮತ್ತು ಬೆಳೆ ಪರಿಹಾರ ಹಾಗೂ ಸರ್ಕಾರದ ಮತ್ತಿತರ ಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಳಸಲಾಗುತ್ತಿದ್ದು, ಮೊಬೈಲ್ ಆಪ್ ಬಳಸಲು ನಿಮ್ಮ ಗ್ರಾಮಕ್ಕೆ ನೇಮಕವಾದ ಖಾಸಗಿ ನಿವಾಸಿಗಳ ಸಹಾಯ ಪಡೆಯುವುದು.

ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಳಸುವ ವಿಧಾನ:
ಪ್ಲೇ ಸ್ಟೋರ್‌ನಲ್ಲಿ ಮುಂಗಾರು ರೈತರ ಬೆಳೆ ಸಮೀಕ್ಷೆ 2022-23 ಆ್ಯಪ್ ಡೌನ್‌ಲೊಡ್ ಮಾಡಿಕೊಳ್ಳುವುದು. ಆರ್ಥಿಕ ವರ್ಷ ಹಾಗೂ ಋತು ದಾಖಲಿಸುವುದು. ರೈತರ ಹೆಸರು, ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವುದು. ನಮೂದಿಸಿದ ಮೊಬೈಲ್ ಸಂಖ್ಯೆಗೆ ಔಖಿP ಬರುತ್ತದೆ. ಔಖಿP ದಾಖಲಿಸಿ ಸಲ್ಲಿಸುವುದು. ಮಾಸ್ಟರ್ ವಿವರ, ಪಹಣಿ ಮತ್ತು ಮಾಲೀಕರ ವಿವರ, ಪಾಲಿಗಾನ್ ಹಾಗೂ ಜಿ.ಐ.ಎಸ್. ಮ್ಯಾಪ್ ಡೌನ್‌ಲೋಡ್ ಮಾಡಿಕೊಳ್ಳುವುದು. ಬೆಳೆ ಸರ್ವೆ ಪ್ರಾರಂಭಿಸು ಕ್ಲಿಕ್ ಮಾಡುವುದು. ಜಿಲ್ಲೆ, ತಾಲ್ಲೂಕು, ಹೋಬಳಿ, ಗ್ರಾಮ ಆಯ್ಕೆ ಮಾಡಿ, ಸರ್ವೆ ನಂಬರ್ ನಮೂದಿಸುವುದು ಹಾಗೂ ಹಿಸ್ಸಾ ಇದ್ದರೆ ಅದನ್ನು ಆಯ್ಕೆ ಮಾಡುವುದು. ಮಾಲೀಕರ ಹೆಸರು ಆಯ್ಕೆ ಮಾಡುವುದು ಹಾಗೂ ಕ್ಷೇತ್ರವನ್ನು ನಮೂದಿಸುವುದು. ಮಾಲೀಕರ ಪರವಾಗಿ ಇನ್ನೊಬ್ಬರು ಬೆಳೆ ದಾಖಲೆ ಮಾಡುತ್ತಿದ್ದರೆ, ರೈತರ ಪರವಾಗಿ ಬೆಳೆ ಮಾಹಿತಿಯನ್ನು ದಾಖಲಿಸುತ್ತಿದ್ದೇನೆಂದು ಆಯ್ಕೆ ಮಾಡುವುದು. ರೈತರ ಪರವಾಗಿ ದಾಖಲಿಸುತ್ತಿದ್ದರೆ ಸದರಿ ರೈತರ ಮೊಬೈಲ್ ನಂಬರ್ ದಾಖಲಿಸಿ ಮಾಹಿತಿಯನ್ನು ಡೌನ್‌ಲೋಡ್ ಮಾಡುವುದು. ಸದರಿ ರೈತರ ಹೊಲಕ್ಕೆ ಹೋಗಿ ಸರ್ವೆ ನಂಬರ್, ಗಡಿ ರೇಖೆಯೊಳಗೆ ನಿಂತು ವಿವರವನ್ನು ದಾಖಲಿಸಿ, ಫೋಟೋ ತೆಗೆದು ಮಾಹಿತಿಯನ್ನು ಸೇರಿಸಬೇಕು.

You may have missed