
ತುಮಕೂರು: 2022-23ನೇ ಸಾಲಿನ ಕೊರಟಗೆರೆ ತಾಲ್ಲೂಕಿನ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಮೆಟ್ರಿಕ್ ಪೂರ್ವ 5ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಜೂನ್ 30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಗೊಡ್ರಹಳ್ಳಿ, ಕೋಳಾಲ, ಕೊರಟಗೆರೆ ಟೌನ್, ತೋವಿನಕೆರೆ ಸಂತೇಮೈದಾನ, ವಡ್ಡಗೆರೆ ಅಮ್ಮಾಜಿ ದೇವಸ್ಥಾನದ ಆವರಣ, ಕ್ಯಾಮೇನಹಳ್ಳಿ ಗ್ರಾಮಪಂಚಾಯ್ತಿ ಪಕ್ಕ ಹಾಗೂ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಮಾರುತಿ ಆಸ್ಪತ್ರೆ ಪಕ್ಕ ಕೊರಟಗೆರೆ ಟೌನ್‌ನಲ್ಲಿರುವ ವಿದ್ಯಾರ್ಥಿ ನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನಲ್ಲಿ ಆರ್ಜಿ ಸಲ್ಲಿಸಬಹುದಾಗಿದೆ. ಹೊಸ ವಿದ್ಯಾರ್ಥಿಗಳು ಜೂನ್ 22 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಜೂನ್ 30 ಕಡೆಯದಿನವಾಗಿದೆ. ಹೊಸ ಅರ್ಜಿಗಳನ್ನು ತಾಲ್ಲೂಕು ಕಲ್ಯಾಣ ಅಧಿಕಾರಿಗಳು ಜುಲೈ 2ರಂದು ಪರಿಶೀಲನೆ ಮಾಡಲು ಅಂತಿಮ ದಿನವಾಗಿದ್ದು, ಜುಲೈ 5 ರಂದು ಕೌನ್ಸಿಲಿಂಗ್ ಮೂಲಕ ಆಯ್ಕೆಯಾದ ಹೊಸ ವಿದ್ಯಾರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಣೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು ಜುಲೈ 8 ಕಡೆಯದಿನವಾಗಿದೆ.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಅದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿನ್ನು ನೋಡಬಹುದಾಗಿದ್ದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bಛಿತಿಜ.hosಣeಟs@ಞಚಿಡಿಟಿಚಿಣಚಿಞಚಿ.gov.iಟಿ ಇ-ಮೇಲ್ ಮೂಲಕ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 080-8050370006ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು