
ಮಧುಗಿರಿ: ಪಟ್ಟಣದ ಕನ್ನಡ ಭವನ ಕಾಮಗಾರಿ ಪೂರ್ಣಗೊಳಿಸಲು ವಿವಿಧ ಮೂಲಗಳಿಂದ ಹಣ ಕಾಸಿನ ನೆರವು ನೀಡುವುದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಪಟ್ಟಣದ ನಿರೀಕ್ಷಣ ಮಂದಿರದಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ತಾಲೂಕು ಕ.ಸಾ.ಪ. ಅಧ್ಯಕ್ಷೆ ಸಹನ ನಾಗೇಶ್ ಹಾಗೂ ಪಧಾದಿಕಾರಿಗಳು ನನ್ನನ್ನು ಭೇಟಿಯಾಗಿ ಸುಮಾರು ವರ್ಷಗಳಿಂದ ಅಮೆ ಗತಿಯಲ್ಲಿ ಸಾಗುತ್ತಿರುವ ಕನ್ನಡ ಭವನ ಕಟ್ಟಡ ಕಾಮಗಾರಿಯನ್ನು ಪೂರ್ಣಗೊಳಿಸಲು ಆರ್ಥಿಕ ನೆರವು ಕೊಡಿಸುವಂತೆ ಮನವಿ ಮಾಡಿದ್ದರು.
ಮನವಿಗೆ ಸ್ಪಂದಿಸಿ ಭವನದ ಆಸನ ವ್ಯವಸ್ಥೆ ಇನ್ನಿತರ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಹಕಾರ ನೀಡುವುದಾಗಿ ತಿಳಿಸಿದ ಅವರು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಹಾಗೂ ನಂ.1 ರಷ್ಟರಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲಾರ ಸಹಕಾರದೊಂದಿಗೆ ಕಾರ್ಯಕ್ರಮಗಳು ಅಲ್ಲಿಯೇ ನೆಡೆಯುವಂತಾಗ ಬೇಕು,
ತಾಲೂಕಿನ ಸಾಹಿತ್ಯ, ಸಾಹಿತಿಗಳು ಹಾಗೂ ಗಣ್ಯರ ಕುರಿತ ಲೇಖನಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಉದ್ದೇಶದಿಂದ ಸ್ಮರಣ ಸಂಚಿಕೆಯನ್ನು ಹೊರತರಲು ಮಲನ.ಮೂರ್ತಿ, ನಾ.ಮಹಲಿಂಗೇಶ್ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದರು.
ಜು. 6 ರಂದು ಮಧುಗಿರಿ ಪಟ್ಟಣಕ್ಕೆ ಆಗಮಿಸಲಿರುವ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರಹೆಗ್ಗಡೆ ಯವರನ್ನು ಅದ್ದೂರಿಯಾಗಿ ಸ್ವಾಗತಿಸಿ ಅಭಿನಂದಿಸಲಾಗುವುದು ಎಂದರು. ಆ.6 ರಂದು ವಿರೋಧ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ದಾವಣಗೆರೆಯಲ್ಲಿ ಆಯೋಜಿಸಲಾಗುತ್ತಿದ್ದು ಈ ಬಗ್ಗೆ ಜುಲೈ 3 ರಂದು ಆರ್.ವಿ.ದೇಶಪಾಂಡೆರವರ ಬೆಂಗಳೂರಿನ ನಿವಾಸದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡರ ಜತೆ ಪೂರ್ವ ಭಾವಿ ಸಭೆಯನ್ನು ನಡೆಸಲಾಗುತ್ತಿದ್ದು ಹುಟ್ಟು ಹಬ್ಬದ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿಯವರನ್ನು ಸಹ ಆಹ್ವಾನಿಸಲಾಗುವುದು. ದಾವಣಗೆರೆಯ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು 5 ಲಕ್ಷ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ ಎಂದರು. ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಎಂ.ಎಸ್.ಮಲ್ಲಿಕಾರ್ಜುನಯ್ಯ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನAಜುAಡಯ್ಯ ಇದ್ದರು.
ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು