web stats

Madhugirinews

#1NewsofMadhugiri

ಸರಕಾರಗಳು ಶಿಕ್ಷಣ ಕ್ಷೇತ್ರ ಬಲಪಡಿಸಲು ಹಲವು ಯೋಜನೆ ಜಾರಿಗೆ ತಂದಿವೆ-ಡಾ: ಜಿ.ಪರಮೇಶ್ವರ್

ತುಮಕೂರು: ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತç ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಇದರ ಪ್ರಯೋಜನವನ್ನು ಪಡೆದುಕೊಂಡು ವಿದ್ಯಾರ್ಥಿಗಳು ವಿದ್ಯಾವಂತರಾಗಬೇಕು ಹಾಗೂ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕೆಂಬುದು ನಮ್ಮ ಸರ್ಕಾರದ ಆಶಯವಾಗಿದೆ ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ್ ಅವರು ಕರೆ ನೀಡಿದರು.
ಕೊರಟಗೆರೆ ತಾಲ್ಲೂಕಿನ ತೋವಿನಕೆರೆ ಗ್ರಾಮದಲ್ಲಿಂದು ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಔSಂAಖಿ ಸಂಸ್ಥೆ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಈ ಸಂಸ್ಥೆಯವರು 70 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿಗಳನ್ನು ನಿರ್ಮಿಸಿರುವುದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತುಂಬಾ ಅನುಕೂಲವಾಗಿದೆ ಎಂದರಲ್ಲದೆ, ಔSಂAಖಿ ಸಂಸ್ಥೆಯವರು ಇಲ್ಲಿಯವರೆಗೆ ವಿವಿಧ ಜಿಲ್ಲೆಗಳ 82 ಶಾಲೆಗಳಿಗೆ ಕಟ್ಟಡಗಳನ್ನು ನಿರ್ಮಿಸಿ ಕೊಡುವುದರ ಮೂಲಕ ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಉತ್ತಮವಾದ ಸೇವೆಯನ್ನು ಮಾಡುತ್ತಿದ್ದಾರೆ ಎಂದು ಅಭಿನಂದಿಸಿದರು.
ವಿಶ್ವಮಟ್ಟದಲ್ಲಿ ಭಾರತ ದೇಶವನ್ನು ಶಿಕ್ಷಣ ಕ್ಷೇತ್ರದಿಂದ ಗುರುತಿಸಲಾಗಿದೆ. ದೇಶದಲ್ಲಿ ಹಲವಾರು ಬದಲಾವಣೆಗಳು ಆಗಿರುವುದು ಶಿಕ್ಷಣದಿಂದ ಮಾತ್ರ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ಬಲಿಷ್ಠಪಡಿಸಲು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ಅವರು ಮೊಟ್ಟ ಮೊದಲ ಬಾರಿಗೆ ಮದ್ಯಾಹ್ನದ ಬಿಸಿಯೂಟ ಯೋಜನೆಯನ್ನು ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಪ್ರಾರಂಭಿಸಿದ್ದರು. ತದ ನಂತರ ಈ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನ ಮಾಡಲಾಯಿತು. ಇಂದು ಈ ಯೋಜನೆ ತುಂಬಾ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿರುವ ಎಲ್ಲಾ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸಿ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ದೃಷ್ಟಿಯಿಂದ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರವಾದ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಯಾರಿಸಿದ್ದಾರೆ. ಮುಂದಿನ ದಿನಗಳಲ್ಲಿ ನರೇಗಾ ಯೋಜನೆಯಡಿ ಹಾಗೂ ಇತರೆ ಅನುದಾನವನ್ನು ಬಳಸಿಕೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು. ತೋವಿನಕೆರೆ ಗ್ರಾಮದಲ್ಲಿ 32ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಆಸ್ಪತ್ರೆ ಕಾಮಗಾರಿಯು ಮೇಲ್ಛಾವಣಿ ಹಂತದಲ್ಲಿದ್ದು, ಇನ್ನೂ ಆರು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಟಿ.ಹೆಚ್. ಓ. ಅವರಿಗೆ ಹೇಳಿದರು.
ಕೊರಟಗೆರೆ ತಾಲೂಕಿನಲ್ಲಿ ಜೆಜೆಎಂ ಯೋಜನೆಯಡಿಯಲ್ಲಿ ಮನೆ ಮನೆಗೆ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರನ್ನು ಕೊಡುವ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಹೇಳಿದರು.
ಎತ್ತಿನಹೊಳೆ ಯೋಜನೆಯ ಕಾಮಗಾರಿ ಇನ್ನೊಂದು ವರ್ಷದೊಳಗೆ ಪೂರ್ಣಗೊಳ್ಳಲಿದ್ದು, ಈ ಯೋಜನೆಯಿಂದ ಕೊರಟಗೆರೆ ತಾಲ್ಲೂಕಿನ 39 ಕೆರೆಗಳಿಗೆ ನೀರನ್ನು ತುಂಬಿಸಲಾಗುವುದು ಎಂದು ಹೇಳಿದರು. ತೋವಿನಕೆರೆ ಮತ್ತು ಹಳೆ ವಿದ್ಯಾರ್ಥಿಗಳ ಬಹುದಿನದ ಬೇಡಿಕೆಯಾಗಿದ್ದ ಆಂಗ್ಲ ಮಾಧ್ಯಮದಲ್ಲಿ 9 ಮತ್ತು 10ನೇ ತರಗತಿಗಳನ್ನು ಜೂನ್ 2024ರಿಂದ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಜಿಯವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಮಧುಗಿರಿ ಉಪವಿಭಾಗಾಧಿಕಾರಿ ರಿಷಿ ಆನಂದ್, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಆರ್.ಮAಜುನಾಥ್, ತಹಶೀಲ್ದಾರ್ ರಂಜಿತ್, ಕಾರ್ಯನಿರ್ವಾಹಕ ಅಧಿಕಾರಿ ಡಾ.ಡಿ. ದೊಡ್ಡಸಿದ್ದಯ್ಯ, ಸೇರಿದಂತೆ ಮತ್ತಿತರರು ಹಾಜರಿದ್ದರು.
ಜನ ಸಂಪರ್ಕ ಸಭೆ:- ಕಾರ್ಯಕ್ರಮ ಮುಗಿದ ನಂತರ ಮಾನ್ಯ ಸಚಿವರು, ಸಾರ್ವಜನಿಕರಿಂದ ಕುಂದು ಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದರು.

You may have missed