
ತುಮಕೂರು/ಚಿತ್ರದುರ್ಗ/ಕಲಬುರಗಿ/ಬೆಂಗಳೂರು/ಹಾವೇರಿ/ಹಾಸನ ಜಿಲ್ಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ
ತುಮಕೂರು: ಸಿರಾ ನಗರದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಶಿರಾದ ಎಇ ನಾಗೇಂದ್ರಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ.
ತುಮಕೂರಿನಲ್ಲಿ ಮನೆ ಹಾಗೂ ಶಿರಾದ ಕಚೇರಿ ಮೇಲೆ ಲೋಕಾ ದಾಳಿ ನಡೆದಿದ್ದು ಅಧಿಕಾರಿಗಳಿಂದ ಪರಿಶೀಲನೆ ಮಾಡುತಿದ್ದು ಲೋಕಾಯುಕ್ತ ಡಿವೈಎಸ್ ಪಿ ಮಂಜುನಾಥ್ ಹಾಗೂ ಹರೀಶ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಕಚೇರಿ ಮನೆ ಹಾಗೂ ಪಾರ್ಮಹೌಸ್ ಮೇಲೆ ದಾಳಿ ನಡೆದಿದ್ದು ಮಹತ್ವದ ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ತುಮಕೂರಿನ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆ ಮೇಲೂ ರೇಡ್ ಮಾಡಲಾಗಿದೆ. ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ಭ್ರಷ್ಟಚಾರದ ಆರೋಪ ಹೊತ್ತಿರುವ ಇಬ್ಬರು ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಇಬ್ಬರ ಮನೆಗಳಿಗೆ ಸೂರ್ಯೋದಯಕ್ಕೂ ಮುನ್ನವೇ ವಾಹನಗಳಲ್ಲಿ ಪ್ರತ್ಯೇಕ ತಂಡವಾಗಿ ಆಗಮಿಸಿದ ಅಧಿಕಾರಿಗಳಿಂದ ಹಲವಾರು ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ. ಚಿತ್ರದುರ್ಗದ ಲೋಕಾಯುಕ್ತ ಎಸ್ಪಿ ವಾಸುದೇವ ರಾವ್ ನೇತೃತ್ವದಲ್ಲಿ ಈ ಎರಡೂ ದಾಳಿ ನಡೆಸಲಾಗಿದೆ. ಇದಲ್ಲದೆ, ಬೆಂಗಳೂರು ಗ್ರಾಮಾಂತರ, ಹಾಸನ, ಹಾವೇರಿ, ಕಲಬುರಗಿ, ದಾವಣಗೆರೆಯಲ್ಲೂ ಅ. 30ರ ಬೆಳಗಿನ ಜಾವ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರಿಗೆ ಸೇರಿದ ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಮನೆಗೆ ಒಂದು ತಂಡ ಆಗಮಿಸಿದ್ದರೆ, ನಾಯ್ಕ್ ಅವರಿಗೆ ಸೇರಿದ್ದೆನ್ನಲಾಗಿರುವ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಗೆ ಎರಡನೇ ತಂಡ ಹೋಗಿದೆ.
ಅಧಿಕಾರಿಗಳ ಮತ್ತೊಂದು ತಂಡ, ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದು, ಇದೇ ಅಧಿಕಾರಿಗೆ ಸೇರಿದ್ದೆನ್ನಲಾಗಿರುವ ಹಿರಿಯೂರು ನಗರದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣಮೂರ್ತಿಯವರು ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಬೆಂಗಳೂರು ಸೇರಿ ಹಲವಾರು ಕಡೆ ದಾಳಿ: ಬೆಂಗಳೂರಿನ ಕೆ.ಆರ್. ಪುರಂನಲ್ಲಿರುವ ಮೂವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ ಎಂಬ ಮಾಹಿತಿಯಿದೆ. ಅದಲ್ಲದೆ, ಹಾಸನದಲ್ಲಿ ಕೆಪಿಟಿಸಿಎಲ್ ಜೂನಿಯರ್ ಇಂಜಿನಿಯರ್ ಎಚ್.ಇ. ನಾರಾಯಣ, ಹಾವೇರಿಯಲ್ಲಿ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳಾದ ಆರ್ ಎಫ್ ಒ ಪರಮೇಶ್ವಪ್ಪ ಪೇರಲನವರ್, ನ್ಯಾಮತಿ ಆರ್ ಎಫ್ ಒ ಮಾಲತೇಶ್; ಕಲಬುರಗಿಯಲ್ಲಿ ಬೀದರ್ ವಲಯ ಅರಣ್ಯಾಧಿಕಾರಿ ಬಸವರಾಜ್ ಡಾಂಗೆ ಹಾಗೂ ದೇವದುರ್ಗದ ಕೃಷ್ಣಾ ಭಾಗ್ಯ ಜಲನಿಗಮ ಲಿಮಿಟೆಡ್ (ಕೆಬಿಜೆಎನ್ ಎಲ್) ಸಂಸ್ಥೆಯ ಎಕ್ಸಿಕ್ಯೂಟಿವ್ ಇಂಜಿನಿಯರ್ ತಿಪ್ಪಣ್ಣ ಅನ್ನದಾನಿ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಹಾಸನದ ಹೊರವಲಯದಲ್ಲಿರುವ ಬೊಮ್ಮನಾಯಕನ ಹಳ್ಳಿಯಲ್ಲಿರುವ ಎಚ್.ಇ. ಸತ್ಯನಾರಾಯಣ ಅವರ ನಾರಾಯಣ ನಿವಾಸ ಎಂಬ ಮನೆಯ ಮೇಲೆ ಹಾಗೂ ಗೊರೂರಿನಲ್ಲಿರುವ ಅವರ ಕಚೇರಿಯ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ರೈಡ್ ಅನ್ನು ಜಿಲ್ಲೆಯ ಲೋಕಾಯುಕ್ತ ಎಸ್ಪಿ ಮಲ್ಲಿಕ್, ಡಿವೈಎಸ್ ಪಿ ತಿರುಮಲೇಶ್, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಬಾಲು ಹಾಗೂ ಶಿಲ್ಪಾ ನೇತೃತ್ವದಲ್ಲಿ ಈ ರೈಡ್ ಸಂಯೋಜಿಸಲಾಗಿದೆ.
ಇನ್ನು ಹಾವೇರಿಯ ಶಿವಾಜಿ ನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನದ ಬಳಿ ಇರುವ, ಆರ್ ಎಫ್ ಒ ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ ಆರ್ ಎಫ್ ಒ ಮಾಲತೇಶ್ ಅವರ ಮನೆಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಈ ಇಬ್ಬರೂ ಅಧಿಕಾರಿಗಳಿಗೆ ಸೇರಿದ ಸುಮಾರು 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಈ ದಾಳಿಯನ್ನು ದಾವಣಗೆರೆ ಲೋಕಾಯುಕ್ತ ಎಸ್ಪಿಯವರ ನೇತೃತ್ವದಲ್ಲಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮತ್ತ, ಕಲಬರಗಿಯಲ್ಲಿ ನಡೆದ ಎರಡು ದಾಳಿಗಳ ನೇತೃತ್ವವನ್ನು ಜಿಲ್ಲೆಯ ಲೋಕಾಯುಕ್ತ ಎಸ್ಪಿ ಎಸ್.ಎಸ್. ಕರ್ನೂಲ್ ಅವರು ವಹಿಸಿಕೊಂಡಿದ್ದಾರೆ. ಬೀದರ್ ಜಿಲ್ಲೆಯ ಅರಣ್ಯಾಧಿಕಾರಿ ಬಸವರಾಜ ಡಾಂಗೆ, ದೇವದುರ್ಗದ ಕೃಷ್ಣಾ ಭಾಗ್ಯ ಜಲನಿಗಮ ಲಿಮಿಟೆಡ್ (ಕೆಬಿಜೆಎನ್ ಎಲ್) ಸಂಸ್ಥೆಯ ಎಲ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಆಗಿರುವ ತಿಪ್ಪಣ್ಣ ಅನ್ನದಾನಿಯವರ ನಿವಾಸಗಳ ಮೇಲೆ ರೈಡ್ ನಡೆಸಲಾಗಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆ ಎಸಿಎಫ್ ನಾಗೇಂದ್ರ ನಾಯ್ಕ್ ಅವರಿಗೆ ಸೇರಿದ ಹಿರಿಯೂರು ನಗರದ ಚಂದ್ರಾ ಲೇಔಟ್ ನಲ್ಲಿರುವ ಮನೆಗೆ ಒಂದು ತಂಡ ಆಗಮಿಸಿದ್ದರೆ, ನಾಯ್ಕ್ ಅವರಿಗೆ ಸೇರಿದ್ದೆನ್ನಲಾಗಿರುವ ತವಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಗೆ ಎರಡನೇ ತಂಡ ಹೋಗಿದೆ.
ಅಧಿಕಾರಿಗಳ ಮತ್ತೊಂದು ತಂಡ, ಸಮಾಜ ಕಲ್ಯಾಣ ಇಲಾಖೆಯ ಅಸಿಸ್ಟೆಂಟ್ ಡೈರೆಕ್ಟರ್ ಕೃಷ್ಣಮೂರ್ತಿ ಮನೆ ಮೇಲೆ ದಾಳಿ ನಡೆಸಿದ್ದು, ಇದೇ ಅಧಿಕಾರಿಗೆ ಸೇರಿದ್ದೆನ್ನಲಾಗಿರುವ ಹಿರಿಯೂರು ನಗರದ ಕುವೆಂಪು ನಗರದ ಮನೆ ಮೇಲೆ ದಾಳಿ ನಡೆಸಲಾಗಿದೆ. ಕೃಷ್ಣಮೂರ್ತಿಯವರು ಚಿತ್ರದುರ್ಗದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು