
ತುಮಕೂರು: ಖಾಸಗಿ ಬಸ್ ಹಾಗೂ ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮಿನಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವರದಿಯಾಗಿದೆ.
ತುಮಕೂರಿನ ಮರಳೂರು ಕೆರೆ ಏರಿ ಬಳಿ ಘಟನೆ ಜರುಗಿದ್ದು ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಬರ್ತಿದ್ದ ಖಾಸಗಿ ಬಸ್ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ತುಮಕೂರು ಕಡೆಯಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಓಮಿನಿ ಕಾರಿಗೆ ಡಿಕ್ಕಿಯಾಗಿದೆ. ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓಮಿನಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಬಸ್ ನಲ್ಲಿದ್ದ 10 ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ತಾಲೂಕಿನ ಮಾನಂಗಿ ಗ್ರಾಮದ ನಿವಾಸಿ ಸುರೇಶ್ ಹಾಗೂ ಸುಮಾ ಮೃತ ದುರ್ದೈವಿಗಳಾಗಿದ್ದು ತುಮಕೂರಿನಿಂದ ಮಾನಂಗಿ ಕಡೆಗೆ ಹೊರಟ್ಟಿದ್ದ ಮೃತರು.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ. ಸದ್ಯ ಖಾಸಗಿ ಬಸ್ ಚಾಲಕನನ್ನ ವಶಕ್ಕೆ ಪಡೆದ ತುಮಕೂರು ಗ್ರಾಮಾಂತರ ಪೊಲೀಸರು ಹೆಚ್ಚಿನ ಪರಿಶೀಲನೆ ಮಾಡುತ್ತಿದ್ದಾರೆ. ಮೃತದೇಹಗಳು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದ್ದು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು