
ಮಧುಗಿರಿ: ಕಂದಾಯ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣು ತುಂಬುತ್ತಿದ್ದ ಖಚಿತ ಮಾಹಿತಿ ಮೇರೆ ತಹಸೀಲ್ದಾರ್ ಸಿಗ್ಬತ್‌ವುಲ್ಲಾ ತಂಡ ದಾಳಿ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ತಾಲೂಕಿನ ದುಡ್ಡೇರಿ ಹೋಬಳಿ ದಬ್ಬೇಗಟ್ಟ ಗ್ರಾ.ಪಂ ವ್ಯಾಪ್ತಿಯ ಬೆಲ್ಲದ ಮಡುಗು ರಸ್ತೆಯ ಸಮೀಪವಿರುವ ಸರಕಾರಿ ಜಮೀನಿನಲ್ಲಿ ಅನುಮತಿ ಇಲ್ಲದೆ ಅಕ್ರಮವಾಗಿ ಮಣ್ಣನ್ನು ತುಂಬುತಿದ್ದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ತಹಸೀಲ್ದಾರ್ ಭೇಟಿ ನೀಡಿ ಸ್ಥಳದಲ್ಲಿದ್ದ ಟಿಪ್ಪರ್ ಲಾರಿಗಳು ಹಾಗೂ ಇತರೆ ವಾಹನಗಳನ್ನು ವಶಕ್ಕೆ ಪಡೆದಿದ್ದು ಚಾಲಕ ನಾಪತ್ತೆಯಾಗಿದ್ದಾನೆ ಬಡವನಹಳ್ಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು