
ತುಮಕೂರು: ತುಮಕೂರು ನಗರ ಮತ್ತು ಕುಣಿಗಲ್ ಪಟ್ಟಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ IPಉಖS ಮೂಲಕ ಸ್ವೀಕೃತಿಯಾಗಿರುವ ಅರ್ಜಿಗಳನ್ನು ತಮ್ಮಲ್ಲಿ ಉಳಿಸಿಕೊಳ್ಳದೆ ತ್ವರಿತವಾಗಿ ವಿಲೇವಾರಿ ಮಾಡಬೇಕೆಂದು ಎಲ್ಲಾ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿAದು ವಿಡಿಯೋ ಕಾನ್ಫರೆನ್ಸ್ ಮೂಲಕ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಆಶ್ರಯ ಯೋಜನೆಯಡಿಯಲ್ಲಿ ನಿವೇಶನಗಳನ್ನು ನೀಡಲು ಗುರುತಿಸಲಾಗಿರುವ ಭೂಮಿಯನ್ನು ಲೇಔಟ್ ಆಗಿ ಅಭಿವೃದ್ಧಿಪಡಿಸಲು ಕಾರ್ಯ ನಿರ್ವಹಣಾಧಿಕಾರಿಗಳು ನಗರ ಯೋಜನಾ ವಿಭಾಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ ಅನುಮತಿಯನ್ನು ಪಡೆಯಬೇಕು ಎಂದು ಹೇಳಿದರು. ತಹಶೀಲ್ದಾರ್ ಹಂತದಲ್ಲಿರುವ 90ದಿನಗಳ ಒಳಗಿರುವ ಕೋರ್ಟ್ ಪೆಂಡೆನ್ಸಿ ಪ್ರಕರಣ, ನಮೂನೆ 53 ಮತ್ತು 57ರಲ್ಲಿ ಸ್ವಿಕೃತವಾಗಿರುವ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ತಿಳಿಸಿದರು. ತಾಲ್ಲೂಕು ಮಟ್ಟದಲ್ಲಿ ನಮೂನೆ 53 ಮತ್ತು 57 ಕ್ಕೆ ಸಂಬAಧಿಸಿದAತೆ ಕಮಿಟಿ ರಚನೆ ಕುರಿತಂತೆ ಎಲ್ಲಾ ತಹಶೀಲ್ದಾರರು ಮಾಹಿತಿಯನ್ನು ನಾಳೆ ಸಂಜೆಯೊಳಗೆ ಕೊಡಬೇಕು ಎಂದು ಹೇಳಿದರು. ಎಲ್ಲಾ ತಹಶೀಲ್ದಾರರು ತಮ್ಮ ಕಚೇರಿಗಳಲ್ಲಿ ಕಡ್ಡಾಯವಾಗಿ ಈ-ಆಫೀಸ್ ತಂತ್ರಾAಶದ ಮೂಲಕವೇ ಕಡತಗಳನ್ನು ಸ್ವೀಕೃತಿ ಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಯಾವುದೇ ಕಡತಗಳನ್ನು ಭೌತಿಕವಾಗಿ ವಿಲೇವಾರಿ ಮಾಡಬಾರದು ಎಂದು ಹೇಳಿದರು. ಜಿಲ್ಲೆಯಲ್ಲಿ ಮೂರು ತಿಂಗಳ ಒಳಗೆ ಹೊಸದಾಗಿ ಸೇರ್ಪಡೆಯಾಗಿರುವ ಯುವ ಮತದಾರರ ಮಾಹಿತಿಯನ್ನು ವಿಧಾನಸಭಾ ಕ್ಷೇತ್ರವಾರು ಎಲ್ಲಾ ತಹಶೀಲ್ದಾರ್ ಅವರು ನೀಡಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಯುವ ಮತದಾರರನ್ನು ಮತಪಟ್ಟಿಗೆ ನೋಂದಾಯಿಸಲು ನವೆಂಬರ್ 18 ಮತ್ತು 19ರಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಆದರಿಂದ ಎಲ್ಲಾ ಬಿ.ಎಲ್.ಓ. ಮತ್ತು ತಹಶೀಲ್ದಾರ್‌ರವರು ತಮ್ಮ ಕಚೇರಿಯಲ್ಲಿ ಹೆಚ್ಚುವರಿಯಾಗಿ ನಮೂನೆ 6, 6ಎ, 6ಬಿ, 7 ಮತ್ತು 8ರ ನಮೂನೆಗಳನ್ನು ಇಟ್ಟುಕೊಳ್ಳಬೇಕು ಎಂದು ಹೇಳಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ, ಉಪ ವಿಭಾಗಾಧಿಕಾರಿ ಗೌರವ್‌ಕುಮಾರ್‌ಶೆಟ್ಟಿ, ತಹಶೀಲ್ದಾರ್ ಸಿದ್ದೇಶ್ ಉಪಸ್ಥಿತರಿದ್ದರು.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು