
ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನವೆಂಬರ್ 10ರಂದು ನಡೆಯಲಿರುವ ಕೆಡಿಪಿ ಸಭೆಗೆ ವಾಸ್ತವ ಮಾಹಿತಿಯನ್ನು ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಜಿಲ್ಲಾ ಪಂಚಾಯತಿಯಲ್ಲಿAದು ಜರುಗಿದ ಪ್ರಗತಿ ಪರಿಶೀಲನಾ ಸಭೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಕೆಡಿಪಿ ಸಭೆಗೆ ಸಂಬAಧಿಸಿದAತೆ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಯಿಂದ ಅನುಷ್ಟಾನಗೊಳ್ಳುವ ವಿವಿಧ ಯೋಜನೆಗಳ ಪ್ರಗತಿ ಮಾಹಿತಿಯ ಪಿಪಿಟಿ ಸಿದ್ಧಪಡಿಸಿ ನವೆಂಬರ್ 7ರೊಳಗಾಗಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಬೇಕು. ಪಿಪಿಟಿಯು ಯೋಜನೆಗಳ ಭೌತಿಕ ಗುರಿ, ಅನುಷ್ಟಾನದ ಹಂತ, ಪ್ರಗತಿ ಸಾಧನೆಯ ಸಚಿತ್ರ ವರದಿಯಿಂದ ಕೂಡಿರಬೇಕು ಎಂದು ಸೂಚಿಸಿದರು. ಪ್ರಸಕ್ತ ನವೆಂಬರ್ ಮಾಹೆಯಲ್ಲಿ ಜಿಲ್ಲೆಗೆ ಮುಖ್ಯಮಂತ್ರಿಗಳು ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಖಾತೆ ಸಚಿವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವ ಸಾಧ್ಯತೆಯಿದ್ದು, ಕೆಡಿಪಿ ಸಭೆಯ ಪ್ರಗತಿ ವರದಿ ಆಧಾರದ ಮೇಲೆ ಸಭೆ ನಡೆಸಲಿದ್ದಾರೆ. ಅಧಿಕಾರಿಗಳು ಸಭೆಗೆ ಸಲ್ಲಿಸುವ ಅಂಕಿ ಅಂಶಗಳ ಮಾಹಿತಿಯು ನೈಜತೆಯಿಂದ ಕೂಡಿರಬೇಕು ಎಂದು ತಾಕೀತು ಮಾಡಿದರು.
ಸಚಿವರು ಸಭೆಯಲ್ಲಿ ಪ್ರಮುಖವಾಗಿ ಜಿಲ್ಲೆಯಲ್ಲಿ ಕೈಗೊಂಡಿರುವ ಹೇಮಾವತಿ, ಎತ್ತಿನಹೊಳೆ ಯೋಜನೆ, ರೈಲ್ವೆ ಯೋಜನೆಗಳಿಗಾಗಿ ಪ್ರಗತಿಯಲ್ಲಿರುವ ಭೂ ಸ್ವಾಧೀನ ಪ್ರಕ್ರಿಯೆ, ಪ್ರಸಕ್ತ ವರ್ಷದ ಬಿತ್ತನೆ ಕಾರ್ಯ ಹಾಗೂ ಗುರಿ, ಬರ ನಿರ್ವಹಣೆ, ಬೆಳೆನಷ್ಟ, ಬೆಳೆನಷ್ಟ ಹೊಂದಿದ ರೈತರಿಗೆ ವಿತರಿಸಬೇಕಾದ ಅಂದಾಜು ಪರಿಹಾರ ಮೊತ್ತ, ರಸಗೊಬ್ಬರ ದಾಸ್ತಾನು, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳ ಮೇವಿನ ಕೊರತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯವಾಗಿ ತಮ್ಮ ಇಲಾಖೆಯ ಅಕ್ಟೋಬರ್ ಅಂತ್ಯದವರೆಗಿನ ಪ್ರಗತಿ ಮಾಹಿತಿಯನ್ನು ಹೊಂದಿರಬೇಕು ಎಂದು ಸೂಚಿಸಿದರು. ಸಭೆಯಲ್ಲಿ 2024-25ನೇ ಸಾಲಿನ ಆಯವ್ಯಯ ತಯಾರಿ, 2023-24ನೇ ಸಾಲಿನಲ್ಲಿ ಲೆಕ್ಕ ಶೀರ್ಷಿಕೆವಾರು ಹಂಚಿಕೆಯಾದ ಹಾಗೂ ಹೆಚ್ಚುವರಿಯಾಗಿ ಅಗತ್ಯವಿರುವ ಅನುದಾನದ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು. ಸಭೆಯಲ್ಲಿ ಮುಖ್ಯ ಯೋಜನಾಧಿಕಾರಿ ಸಣ್ಣ ಮಸಿಯಪ್ಪ ಸೇರಿದಂತೆ ಕೃಷಿ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ, ಪಶುಸಂಗೋಪನಾ ಇಲಾಖೆ, ಬೆಸ್ಕಾಂ, ಎತ್ತಿನಹೊಳೆ ಯೋಜನೆ, ಹೇಮಾವತಿ ಯೋಜನೆ, ವಿವಿಧ ರೈಲ್ವೆ ಯೋಜನೆಗಳ ಭೂಸ್ವಾಧೀನಾಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು