web stats

Madhugirinews

#1NewsofMadhugiri

Tumkur-ಪ್ರಜ್ವಲ್‌ರೇವಣ್ಣರನ್ನು ಬಂಧಿಸಿ ಪ್ರಗತಿಪರ ಸಂಘಟನೆಗಳ ಒತ್ತಾಯ

ತುಮಕೂರು: ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಲೈಂಗಿಕ ದೌರ್ಜನ್ಯ ಪ್ರಕರಣ ಅರೋಪಿಗಳನ್ನು ತಕ್ಷಣ ಬಂಧಿಸಿ ಸೂಕ್ತ ತನಿಖೆ ನಡೆಸಿ, ಶಿಕ್ಷೆಗೊಳಪಡಿಸಿ, ಸಂತ್ರಸ್ತ ಮಹಿಳೆಯರು ಮತ್ತವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನಾ ನಿಯೋಗದ ನೇತೃತ್ವ ವಹಿಸಿದ್ದ ಬಾ.ಹ ರಮಾಕುಮಾರಿ ಮಾತನಾಡಿ ಕಳದೆ ಕೆಲವು ದಿನಗಳಿಂದ ಹಾಸನದಲ್ಲಿ ಪೆನ್ ಡ್ರೈವ್ ಮುಖಾಂತರ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹಂಚಲಾಗುತ್ತಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸ್ ಅಪ್ ಗಳಲ್ಲಿ ಹರಿದಾಡುತ್ತಿವೆ. ಈ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಗೊಳಗಾಗುತ್ತಿದ್ದು, ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರತೀದಿನ ಹೊಸಹೊಸ ಚಿತ್ರಗಳು ಮತ್ತು ದೃಷ್ಟಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಚಿತ್ರಗಳು ಮತ್ತು ದೃಶ್ಯಗಳಲ್ಲಿರುವ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ. ಕೆಲವರು ಆತ್ಮಹತ್ಯೆಗೂ ಪ್ರಯತ್ನಿಸಿರುವ ವರದಿಗಳಿವೆ. ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ಪೆನ್ ಡ್ರೈವ್ ಹೊರ ಬರುತ್ತದೆಯೋ, ಅದರಲ್ಲಿ ಯಾವ ಮಹಿಳೆಯ ಖಾಸಗಿ ಚಿತ್ರಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕ ಮತ್ತು ಕುತೂಹಲ ಎಲ್ಲೆಡೆ ಹರಡಿದೆ. ಈ ಪ್ರಕರಣದ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ಪ್ರಜ್ವಲ್ ರೇವಣ್ಣ ಮತ್ತು ಹೊಳೆನರಸೀಪುರದಲ್ಲಿ ಪ್ರಕರಣ ದಾಖಲಾಗಿದ್ದು ಅದರಲ್ಲಿ ಮೊದಲಿಗರಲ್ಲಿ ಆರೋಪಿಯಾಗಿರುವ ಎಚ್.ಡಿ.ರೇವಣ್ಣ ಇವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಬೇಕೆಂದರು. ಸಾರ್ವಜನಿಕವಾಗಿ ಇಷ್ಟೆಲ್ಲಾ ಅನಾಹುತ ನಡೆದು ಆತಂಕ ಹರಡಿರುವಾಗ ಈ ಕುರಿತು ತಡವಾಗಿಯಾದರೂ ಎಚ್ಚೆತ್ತುಕೊಂಡು ಇಡೀ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ ರಾಜ್ಯ ಸರ್ಕಾರದ ಕ್ರಮವನ್ನು ತುಮಕೂರು ಪ್ರಗತಿ ಪರ ಸಂಘಟನೆಗಳ ಒಕ್ಕೂಟ ಮತು ಕರ್ನಾಟಕ ರಾಜ್ಯ ಮಹಿಳಾ ದೌಜನ್ಯ ವಿರೋಧಿ ಒಕ್ಕೂಟ ಸ್ವಾಗತಿಸುತ್ತದೆ, ಮತ್ತು ಯಾವುದೇ ಒತ್ತಡಗಳಿಗೆ ಮಣಿಯದೆ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ರಕ್ಷಣೆ ಮತ್ತು ನ್ಯಾಯವನ್ನು ಒದಗಿಸಿಕೊಡಬೇಕೆಂದರು.

ನAತರ ಪ್ರೊ.ಕೆ ದೊರೈರಾಜ್ ಮಾತನಾಡಿ ಯಾವುದೇ ವ್ಯಕ್ತಿಯ ಖಾಸಗಿ ಬದುಕಿನ ವಿಚಾರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದು ಅಪರಾದವಾಗುತ್ತದೆ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ರಾಜಕೀಯ ಲಾಭವನ್ನಷ್ಟೇ ಗುರಿಯಾಗಿಸಿಕೊಂಡು ಮಹಿಳೆಯರ ಖಾಸಗಿ ಬದುಕಿನ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಸಾರ್ವಜನಿಕವಾಗಿ ಬಿತ್ತರಿಸುವುದು ಅತ್ಯಂತ ಹೀನ ಕೃತ್ಯವಾಗಿದೆ ರಾಜಕೀಯ ಅಧಿಕಾರದ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ಕುಟುಂಬದ ಪ್ರಜ್ವಲ್ ರೇವಣ್ಣ ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿದ್ದಾನೆ. ಅಲ್ಲದೆ ಆ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾನೆ. ಮಹಿಳೆಯರನ್ನು ಈ ಕುಕೃತ್ಯಕ್ಕೆ ಬಳಸಿಕೊಳ್ಳಲು ತನಗಿರುವ ರಾಜಕೀಯ ಅಧಿಕಾರವನ್ನು ಬಳಸಿಕೊಂಡಿದ್ದಾನೆ ಎನ್ನುವುದೂ ಸ್ಪಷ್ಟವಾಗಿದೆ. ಇಂತಹ ದುಷ್ಕರ್ಮಿಗಳನ್ನು ಸರ್ಕಾರ ಹಸ್ತಕ್ಷೇಪ ಮಾಡದೇ ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕೆAದರು.

ಮಹಿಳಾ ಘಟಕದ ಅನುಸೂಯಮ್ಮ ಮಾತನಾಡಿ ಈಗಾಗಲೇ ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಹೊಳೆನರಸಿಪುರದ ಬಿಜೆಪಿ ಮುಖಂಡ ಜಿ. ದೇವರಾಜೇಗೌಡ ಎಂಬುವವರು ಈ ಪ್ರಕರಣಕ್ಕೆ ಸಂಬAಧಿಸಿದAತೆ ನನ್ನ ಬಳಿ 2 ಸಾವಿರಕ್ಕೂ ಹೆಚ್ಚು ಫೋಟೋ, ವೀಡಿಯೋಗಳಿವೆ ಆ ಕುರಿತು ಬಿಜೆಪಿ ಹೈಕಮಾಂಡ್ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ. ಪೋಲೀಸರು ಕೂಡಲೇ ಅವರನ್ನು ವಿಚಾರಣೆಗೆ ಒಳಪಡಿಸಿದಲ್ಲಿ ಆ ವೀಡಿಯೋಗಳನ್ನು ಚಿತ್ರೀಕರಿಸಿರುವ ವ್ಯಕ್ತಿ ಯಾರು? ದೇವರಾಜೇಗೌಡರಿಗೆ ಅ ವೀಡಿಯೋಗಳನ್ನು ನೀಡಿರುವ ವ್ಯಕ್ತಿ ಯಾರು? ಎನ್ನುವುದು ಗೊತ್ತಾಗುತ್ತದೆ ಮತ್ತು ಆ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದರೆ ಯಾರ್ಯಾರಿಗೆ ಈ ವೀಡಿಯೋಗಳನ್ನು ನೀಡಿದ್ದಾನೆ. ಹಾಗೂ ಯಾರು ಈ ವೀಡಿಯೋಗಳನ್ನು ಪೆನ್ ಡ್ರೈವ್ ಮುಖಾಂತರ ಸಾರ್ವಜನಿಕರಿಗೆ ಹಂಚುತ್ತಿದ್ದಾರೆ ಎನ್ನುವುದು ತಿಳಿಯಲಿದೆ. ಆಗ ಇನ್ನುಮುಂದೆ ವೀಡಿಯೋಗಳು ಬಿಡುಡೆಯಾಗುವುದನ್ನು ತಡೆಯಬಹುದಾಗಿದೆ, ಹಲವು ಮಹಿಳೆಯರ ಮಾನ, ಪ್ರಾಣಗಳು ಉಳಿಯಲಿವೆ. ಜೊತೆಗೆ ಇಡೀ ಈ ಲೈಂಗಿಕ ಅಕ್ರಮದ ಮೂಲ ವ್ಯಕ್ತಿಯನ್ನು ಬಂಧಿಸಿ ಸಮಾಜದಲ್ಲಿ ಮುಂದೆ ಆಗುವ ಅನಾಹುತಗಳನ್ನು ತೆಡೆಯಬೇಕೆಂದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳಾದ ಡಾ.ಅರುಂಧತ್ತಿ, ರಾಣಿಚಂದ್ರಶೇಖರ್, ದೀಪು, ಲಲಿತಾಮಲ್ಲಪ್ಪ, ದಸಂಸದ ನರಸಿಂಹಮೂರ್ತಿ, ಸಿಐಟಿಯುನ ಸೈಯದ್ ಮುಜೀಬ್. ಸುಬ್ಬಣ್ಣ, ಸ್ಲಂ ಸಮಿತಿ ಮಹಿಳಾ ಘಟಕದ ಅನುಪಮಾ, ಅರುಣ್, ಇನ್ಷಾದ ರಫೀಕ್, ಜನವಾದಿ ಮಹಿಳಾ ಸಂಘಟನೆಯ ಕಲ್ಪನಾ, ರೈತ ಸಂಘಟನೆಯ ಉಮೇಶ್, ಎಐಎಂಎಸ್ ನ ರತ್ನಮ್ಮ, ಶಾಮಲ, ವರದಕ್ಷಿಣೆ ವಿರೋಧಿ ವೇಧಿಕೆಯ ಅನುಸೂಯಮ್ಮ, ಮುಂತಾದವರು ಪಾಲ್ಗೊಂಡಿದ್ದರು.

You may have missed