ಜು 7ರಂದು ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ

ತಾಲೂಕಿನ ಐ.ಡಿ ಹಳ್ಳಿ ಹೋಬಳಿಯ ದೊಡ್ಡದಾಳವಟ್ಟ ಗ್ರಾಮದಲ್ಲಿ 13ನೇ ಶತಮಾನದ ಪುರಾತನ ಇತಿಹಾಸ ಸಾರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಜು 5 ರಂದು ಜಾತ್ರಾ ಮಹೋತ್ಸವ ಆರಂಭಗೊಳ್ಳಲಿದೆ. ಜು ಅಂಕರಾರ್ಪಣೆ, ದ್ವಜಾರೋಹಣ, 6 ರಂದು ಕಲ್ಯಾಣೋತ್ಸವ, ಕಾಶಿಯಾತ್ರೆ, 7ರಂದು ಅಭಿಜನ್ ಮೂರ್ಹತದಲ್ಲಿ ಬ್ರಹ್ಮ ರಥೋತ್ಸವ 8ರಂದು ಶೈನೋತ್ಸವ 9ರಂದು ವಸಂತೋತ್ಸವ ನಡೆಯಲಿದೆ.ಬ್ರಹ್ಮರಥೋತ್ಸವಕ್ಕೆ ಬರುವ ಭÀಕ್ತರಿಗೆ ಪ್ರಸಾದ ವಿನಿಯೋಗ ನಡೆಯಲಿದೆ. ಇನ್ನೂ ಸುತ್ತಮುತ್ತಲಿನ ರೈತರಿಂದ ಅನ್ನಸಂತರ್ಪಣೆ ಮತ್ತು ಪ್ರಸಾದ ವಿನಿಯೋಗ ಜರುಗಲಿದೆ. ಕಾರ್ಯಕ್ರಮಕ್ಕೆ ಸಹಕಾರ ಸಚಿವ ಕೆ.ಎನ್ ರಾಜಣ್ಣ, ಕೇಂದ್ರ ಸಚಿವ ವಿ ಸೋಮಣ್ಣ, ವಿ.ಪ ಸದಸ್ಯ ಆರ್ ರಾಜೇಂದ್ರ ಸೇರಿದಂತೆ ಜಿಲ್ಲಾಕಾರಿ, ಉಪ ವಿ`Áಗಕಾರಿ, ತಹಶಿಲ್ದಾರ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ.
More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು