
ತುಮಕೂರು: ಕೌಟುಂಬಿಕ ಕಲಹದಿಂದ ಬೇಸತ್ತು ಪೊಲೀಸ ಸಬ್ ಇನ್ಸ್ಪೆಕ್ಟರ್ ತುಮಕೂರಿನ ಖಾಸಗಿ ಅತಿಥಿ ಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ನಾಜರಾಜಪ್ಪ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಜು1ರಂದು ತುಮಕೂರು ನಗರದ ದ್ವಾರಕಾ ಹೋಟೆಲ್ ಲಾಡ್ಜ್ ನಲ್ಲಿ ರೂಂ ಬಾಡಿಗೆ ಪಡೆದಿದ್ದ ಸಬ್ ಇನ್ಸ್ಪೆಕ್ಟರ್ ನಾಗರಾಜಪ್ಪ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಕೊಠಡಿಯಲ್ಲಿ ಬಾಂಡ್ ಪೇಪರ್ ನಲ್ಲಿ ವಿಲ್ ಬರೆದಿಟ್ಟಿದ್ದಾರೆ. ಮೊಬೈಲ್ ಸೇರಿದಂತೆ, ಡೆತ್ ನೋಟ್ ಮತ್ತು ಬಾಂಡ್ ಪೇಪರ್ ಪೊಲೀಸರ ವಶಕ್ಕೆ ಪಡೆದಿದ್ದಾರೆ. 4 ನೇ ಮಹಡಿಯಲ್ಲಿ ರೂಂ ಬಾಡಿಗೆ ಪಡೆದಿದ್ರು, ಲಾಡ್ಜ್ ರೂಂ ನಲ್ಲೇ ರೂಂ ನಲ್ಲೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಗೆ ಶರಣರಾಗಿದ್ದಾರೆ. ಕುಟುಂಬದ ಸಮಸ್ಯೆಗಳನ್ನ ಬರೆದಿಟ್ಟು ನನ್ನ ಸಾವಿಗೆ ನಾನೇ ಕಾರಣ ಎಂದು ಡೇತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ. ಇಂದು ಲಾಡ್ಜ್ ನಲ್ಲಿ ದುರ್ವಾಸನೆ ಬಂದಾಗ,ಲಾಡ್ಜ್ ಸಿಬ್ಬಂದಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ತುಮಕೂರು ನಗರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು