
ತುಮಕೂರು: ಮೈಸೂರು ನಗರ ಮಾನಸ ಗಂಗೋತ್ರಿ ಸೆನೆಟ್ ಭವನದಲ್ಲಿ ಜು 26 ರಂದು ರಾಜ್ಯ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಎಸ್ಸಿಎಸ್ಟಿ ಅಧಿಕಾರಿಗಳು ಮತ್ತು ನೌಕರರ ಕಲ್ಯಾಣ ಸಂಘದಿAದ ಸಂಘ ಉದ್ಘಾಟನೆ ಹಾಗೂ ರಾಜ್ಯ ಮಟ್ಟದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸುನಿಲ್ ಕುಮಾರ್ ತಿಳಿಸಿದರು.
ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದು ಮುಖ್ಯ ಅತಿಥಿಗಳಾಗಿ ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ, ಗೃಹ ಸಚಿವ ಡಾ ಜಿ ಪರಮೇಶ್ವರ್ ಸಚಿವರಾದ ಎಚ್,ಸಿ ಮಹದೇವಪ್ಪ, ಪ್ರಿಯಾಂಕ ಖರ್ಗೆ, ಕೆ.ಎನ್ ರಾಜಣ್ಣ ರಾಜ್ಯಾಧ್ಯಕ್ಷ ಎಂ ಸುರೇಶ್ ಕುಮಾರ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9535562184 ಗೆ ಸಂಪರ್ಕಿಸುವAತೆ ತಿಳಿಸಿದ್ದಾರೆ.

More Stories
ಗ್ರಾಮದ ರಕ್ಷಣೆಗೆ ಕರವುಗಲ್ಲು ಪುನರ್ ಪ್ರತಿಷ್ಠಾಪನೆ
ಕೊಡಿಗೇನಹಳ್ಳಿಯ ನೂತನ ಪೊಲೀಸ್ ಕಟ್ಟಡ ಉದ್ಘಾಟನೆ
ಕುರಿ ಸಂತೆಗೆ 5 ಏಕರೆ ಜಾಗ ಮಂಜೂರು