ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್, ತಿಪಟೂರು, ಮಧುಗಿರಿ, ಪಾವಗಢ ಮತ್ತು ಕೊರಟಗೆರೆ ಪ್ರದೇಶದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಚಿರತೆ ಕಾರ್ಯಪಡೆ ರಚಿಸಿ, 59 ಸಿಬ್ಬಂದಿಯನ್ನು ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅನುಮೋದನೆ ನೀಡಿದ್ದಾರೆ.
ಉಪ ಅರಣ್ಯ ಸಂರಕ್ಷಣಾಧಿಕಾರಿ ಚಿರತೆ ಕಾರ್ಯಪಡೆ ಮುಖ್ಯಸ್ಥರಾಗಿರಲಿದ್ದು, ಪಡೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಒಬ್ಬರು ಪಶುವೈದ್ಯರು, ಒಬ್ಬ ವಲಯ ಅರಣ್ಯಾಧಿಕಾರಿ, 4 ಉಪ ವಲಯ ಅರಣ್ಯಾಧಿಕಾರಿ, 8 ಗಸ್ತು ಅರಣ್ಯ ಪಾಲಕರು, 5 ವಾಹನ ಚಾಲಕರು ಹಾಗೂ ಹೊರಗುತ್ತಿಗೆಯಸಿಬ್ಬಂದಿಯನ್ನು ನಿಯೋಜಿಸಲು ಸಚಿವರು ಅನುಮೋದನೆ ನೀಡಿದ್ದಾರೆ. ತುಮಕೂರು ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ 4 ತಂಡದಲ್ಲಿ ಈ ಕಾರ್ಯಪಡೆ ಕಾರ್ಯನಿರ್ವಹಿಸಲಿದೆ. ಈ ಪಡೆ ಚಿರತೆ ಹಾವಳಿ ಇರುವ ಗ್ರಾಮಗಳಲ್ಲಿ ಗಸ್ತು ನಡೆಸಲಿದ್ದು, ರೈತರ ಜಮೀನು, ವಸತಿ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡರೆ ಅದರ ಸೆರೆಗೆ ತುರ್ತು ಕ್ರಮ ವಹಿಸಲಿದೆ. ಕಾರ್ಯಪಡೆಯು ಜಿಲ್ಲಾಡಳಿತದೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯ ನಿರ್ವಹಿಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
More Stories
ಧರ್ಮಸ್ಥಳದ ಬಗ್ಗೆ ಅಪಪ್ರಚಾರಕ್ಕೆ ಕಿವಿಗೂಡಬೇಡಿ-: ಹಾಲಪ್ಪ
ಕ್ರಿಕೆಟ್ ಎಂಬುದು ಯುವ ಸಮೂಹಕ್ಕೆ ಸ್ಪೂರ್ತಿದಾಯಕ
ಕಳವು ಆರೋಪಿಗಳ ಬಂಧನ