
ತುಮಕೂರು: ದೇಶ ಬಲಿಷ್ಠವಾಗಲು ಶಿಕ್ಷಣವೊಂದೇ ಶಕ್ತಿ ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ.ಪರಮೇಶ್ವರ ಅಭಿಪ್ರಾಯಿಸಿದ್ದಾರೆ.
ಬಿದರಕಟ್ಟೆಯಲ್ಲಿ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದಲ್ಲಿ ಪ್ರತಿವರ್ಷ 12ಲಕ್ಷ ಎಂಜಿನಿಯರ್ ಹಾಗೂ ವೈದ್ಯ ಪದವೀಧರರು ಬರುತ್ತಿದ್ದಾರೆ. ಇದರಿಂದ ಜಗತ್ತಿನಾದ್ಯಂತ ಪ್ರತಿಭೆಗಳ ಮಹಾಪೂರವೇ ಹರಿಯುತ್ತಿದೆ. ಅಂದಿನ ಪ್ರಧಾನಿ ಪಂಡಿತ್ ಜವಾಹರ್ ಲಾಲ ನೆಹರೂ ಅವರು ಶಿಕ್ಷಣಕ್ಕೆ ಒತ್ತು ನೀಡಿದ ಪರಿಣಾಮ ಎಂದ ಅವರು, ಪ್ರಾಚೀನ ಭಾರತದಿಂದಲೂ ತಕ್ಷಶಿಲಾ, ನಳಂದ ವಿಶ್ವವಿದ್ಯಾಲಯಗಳಿಂದಲೂ ದೇಶದಲ್ಲಿ ಶಿಕ್ಷಣ ಕ್ರಾಂತಿ ನಡೆದಿದೆ ಎಂದರು.
ಇAದಿನ ಯುವ ಸಮುದಾಯ ಆಧುನಿಕ ಜಗತ್ತಿಗೆ ಒಗ್ಗಿಕೊಳ್ಳಬೇಕಿದೆ ಎಂದ ಅವರು, ಎಐ ಮತ್ತು ರೋಬೋಟಿಕ್ ತಂತ್ರಜ್ಞಾನದAತಹ ಹೊಸ ಅನ್ವೇಷಣೆಗಳತ್ತ ಗಮನ ಹರಿಸಬೇಕು. ಬದಲಾವಣೆಗೆ ಒಗ್ಗಿಕೊಳ್ಳಬೇಕು ಎಂದರು. ತುಮಕೂರು ಜಿಲ್ಲೆ ಈಗಾಗಲೇ ಶಿಕ್ಷಣ ಕಾಶಿ ಎಂಬುದನ್ನು ಸಾಬೀತು ಮಾಡಿದೆ. ಮೂರು ವೈದ್ಯಕೀಯ ಕಾಲೇಜುಗಳು, ಎಂಜಿನಿಯರಿAಗ್ ಕಾಲೇಜುಗಳು, ಪ್ರತಿ ತಾಲೂಕಿನಲ್ಲೂ ಪದವಿ ಕಾಲೇಜುಗಳು ಇದ್ದು, ಗ್ರಾಮೀಣ ಪ್ರದೇಶದ ಬಡವರಿಗೆ, ಪರಿಶಿಷ್ಟ ಹಾಗೂ ಹಿಂದುಳಿದ ಬಡ ವಿದ್ಯಾರ್ಥಿಗಳು ಸೇರಿದಂತೆ ಅಪಾರ ಪ್ರಮಾಣದಲ್ಲಿ ಅನುಕೂಲವಾಗುತ್ತಿದೆ ಎಂದರು.
ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ ನೂತನ ಕ್ಯಾಂಪಸ್‌ಗೆ ಹೆದ್ದಾರಿ ಸಂಪರ್ಕ ರಸ್ತೆ, ಬೋಧಕ ಸಿಬ್ಬಂದಿ ಸೇರಿದಂತೆ ಹಣಕಾಸಿನ ನೆರವು ಅಗತ್ಯವಿದ್ದು, ಸರ್ಕಾರ ಮುಂದಿನ ದಿನಗಳಲ್ಲಿ ಅಗತ್ಯ ನೆರವು ನೀಡಲಿದೆ ಎಂದರು.
ಉನ್ನತ ಶಿಕ್ಷಣ ಸಚಿವ ಡಾ: ಎಂ.ಸಿ.ಸುಧಾಕರ್ ಮಾತನಾಡಿ, ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬAಧಿಸಿದAತೆ ಬೇಡಿಕೆಗಳು ಬರುತ್ತಿವೆ. ಆದರೆ ಭೌತಿಕ ಕಟ್ಟಡಗಳನ್ನು ಕಟ್ಟಿಸಿದಾಕ್ಷಣ ಜ್ಞಾನಕೇಂದ್ರ ಆಗುವುದಿಲ್ಲ. ಅದಕ್ಕೆ ಪೂರಕ ಮೂಭೂತ ಸೌಲಭ್ಯ, ಬೋಧಕ ಸಿಬ್ಬಂದಿ ಸೇರಿದಂತೆ ಪೂರಕ ವಾತಾವರಣ ನಿರ್ಮಿಸಬೇಕು ಎಂದರು.
ಪ್ರಸ್ತುತ ತುಮಕೂರು ವಿಶ್ವವಿದ್ಯಾಲಯದ 500 ಕೋಟಿ ರೂ.ಗಳ ವಿಸ್ತೃತ ಯೋಜನೆಯಿದ್ದು, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಪೂರೈಸಲಾಗುವುದು ಎಂದರು. ರಾಜ್ಯದ ಬಡ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಕನಸಿನ ಮಾತಾಗಿತ್ತು. ಆದರೆ ರಾಜ್ಯ ಸರ್ಕಾರ ಬ್ರಿಟನ್ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ವಿದೇಶಿ ಶಿಕ್ಷಣ ಕೊಡಿಸಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿ ರಾಜ್ಯದ 6 ವಿಶ್ವವಿದ್ಯಾಲಯದ ತಲಾ ಐದು ವಿದ್ಯಾರ್ಥಿಗಳನ್ನು ಆಯ್ದು ಲಂಡನ್ ಪ್ರವಾಸಕ್ಕೆ ಕಳಿಸಲಾಗಿತ್ತು. ಮರಳಿ ಬಂದ ವಿದ್ಯಾರ್ಥಿಗಳಲ್ಲಿ ಹೊಸ ಬದಲಾವಣೆ ಬಂದಿದೆ ಎಂದ ಅವರು, ರಾಜ್ಯದ 8 ಸರ್ಕಾರಿ ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣ ಕೊಡಿಸುವ ಸಂಬAಧ ಗ್ಲೋಬಲ್ ವೇಲ್ಸ್ ಸಂಸ್ಥೆಯೊAದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಅಲ್ಲದೆ ಈಗಾಗಲೆ ಅಜೀಂ ಪ್ರೇಮ್‌ಜಿ ಫೌಂಡೇಶನ್‌ನಿAದ ರಾಜ್ಯದ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ಯೋಜನೆ ಜಾರಿಗೊಳಿಸಲಾಗಿದೆ. ಈಗಾಗಲೆ 37,000 ವಿದ್ಯಾರ್ಥಿನಿಯರು ನೋಂದಾಯಿಸಿಕೊAಡಿದ್ದಾರೆ. ಜನವರಿಯಿಂದ ಮತ್ತೆ ನೋಂದಾಯಿಸಿಕೊಳ್ಳಲಾಗುವುದು. ಬಡ ವಿದ್ಯಾರ್ಥಿನಿಯರು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಸಮಾರAಭದಲ್ಲಿ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ಶಾಸಕ ಟಿ.ಬಿ. ಜಯಚಂದ್ರ, ಶಾಸಕರಾದ ಬಿ. ಸುರೇಶ್ ಗೌಡ, ಜಿ.ಬಿ. ಜ್ಯೋತಿಗಣೇಶ್, ಕುಲಪತಿ ಪ್ರೊಫೆಸರ್ ಎಂ. ವೆಂಕಟೇಶ್ವರಲು, ಕುಲಸಚಿವೆ ನಹೀದಾ ಜûಮ್ ಜûಮ್, ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.

More Stories
ಕುಡಿದ ನಶೆಯಲ್ಲಿ ವ್ಯಕ್ತಿಗೆ ಚಾಕುವಿನಿಂದ ಚುಚ್ಚಿ ಹಲ್ಲೆ.
BIG NEWS ಅಂತರ ರಾಜ್ಯ ದರೋಡೆಕೊರರ ಬಂಧನ
ಹೆತ್ತ ತಾಯಿಯನ್ನೇ ಅತ್ಯಾಚಾರ ಮಾಡಿದ ಮಗನಿಗೆ ಜೀವಾವಧಿ ಶಿಕ್ಷೆ.!